ಇಂದಿನಿಂದ ಬಜೆಟ್ ಅಧಿವೇಶನ ಪ್ರಾರಂಭ: ದಾಖಲೆಯ 15ನೇ ಬಜೆಟ್ ಮಂಡನೆಗೆ ಸಿದ್ದರಾಮಯ್ಯ ಸಿದ್ಧತೆ

Prasthutha|

ಬೆಂಗಳೂರು: ಇಂದಿನಿಂದ ರಾಜ್ಯದ ಬಜೆಟ್ ಅಧಿವೇಶನ ಪ್ರಾರಂಭವಾಗುತ್ತಿದ್ದು, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆ.16ರಂದು ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

- Advertisement -

ಲೋಕಸಭೆ ಚುನಾವಣೆಗೆ ಹೊತ್ತಲ್ಲೇ ಬಜೆಟ್ ಅಧಿವೇಶ ಇರೋದ್ರಿಂದ ಈ ಬಾರಿಯ ಬಜೆಡ್ ಮಹತ್ವ ಪಡೆದುಕೊಂಡಿದೆ. ಫೆಬ್ರವರಿ 16 ರಂದು ರಾಜ್ಯದ ಬಜೆಟ್ ಅನ್ನ ಸಿಎಂ ಸಿದ್ದರಾಮಯ್ಯ ಮಂಡಣೆ ಮಾಡಲಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ 15 ನೇ ಬಾರಿಯ ಬಜೆಟ್ ಮಂಡಣೆ ಇದಾಗಿರಲಿದ್ದು ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆ ಸಿದ್ದರಾಮಯ್ಯ ಅವರ ಪಾಲಿಗೆ ಬರಲಿದೆ.

23ರ ವರೆಗೆ ಒಟ್ಟು 10 ದಿನಗಳ ಕಾಲ ವಿಧಾನಮಂಡಲದ ಜಂಟಿ ಅಧಿವೇಶನ ಇರಲಿದ್ದು. ನಾಳೆಯಿಂದ 23ರ ವರೆಗೆ ಬೆಳಗ್ಗೆ 6ಗಂಟೆಯಿಂದ ಮಧ್ಯರಾತ್ರಿ 12ಗಂಟೆಯ ವರೆಗೆ ವಿಧಾನಸೌಧ ಕಟ್ಟಡದ 2 ಕಿ.ಮೀ. ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು ರಾಜ್ಯದ ಆಯವ್ಯಯ ಮಂಡನೆ ಜೊತೆ ರಾಜಕೀಯ ಜಿದ್ದಾಜಿದ್ದಿನ ವಾಕ್ಸಮರಕ್ಕೆ ಶಕ್ತಿಸೌಧ ವೇದಿಕೆಯಾಗಿದೆ.

- Advertisement -

ಅದಿವೇಶನದಲ್ಲಿ ಹಲವು ವಿಧೇಯಕಗಳು ಮಂಡನೆಯಾಗಲಿದ್ದು ಇದರ ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್- ಮೈತ್ರಿ ನಾಯಕರ ಹೋರಾಟಗಳು ಕೂಡ ನಡೆಯಲಿವೆ.



Join Whatsapp