ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು (ಸೋಮವಾರ) ಅಯೋಧ್ಯೆಗೆ ಭೇಟಿ ನೀಡಿಲಿದ್ದು, ರಾಮಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ವರದಿಯಾಗಿವೆ.
ಇಬ್ಬರಿಗೂ ಜನವರಿ 22ರಂದು ನಡೆದ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಆಹ್ವಾನಿಸಲಾಗಿತ್ತು. ಮುಂದೊಂದು ದಿನ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಅವರು ತಿಳಿಸಿದ್ದರು.
ಕೇಜ್ರಿವಾಲ್ ಹಾಗೂ ಮಾನ್ ಸೋಮವಾರ ಅಯೋಧ್ಯೆಗೆ ತೆರಳಲಿದ್ದಾರೆ. ಅವರ ಕುಟುಂಬ ಸದಸ್ಯರು ಕೂಡ ದೇಗುಲಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.