ದೆಹಲಿಯ ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಗೆ 1 ಸ್ಥಾನ: ಎಎಪಿ

Prasthutha|

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ದೆಹಲಿಯ ಏಳು ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡುವುದಾಗಿ ಎಎಪಿ ಮಂಗಳವಾರ ತಿಳಿಸಿದೆ.

- Advertisement -


ಈಗಾಗಲೇ ಎಎಪಿ ಪಂಜಾಬ್ ರಾಜ್ಯದಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ ಬೆನ್ನಲೇ ಎಎಪಿಯ ಹಿರಿಯ ಮುಖಂಡ ಹಾಗೂ ಸಂಸದ ಸಂದೀಪ್ ಪಾಠಕ್ ಅವರು ದೆಹಲಿಯಲ್ಲಿ ಕಾಂಗ್ರೆಸ್ ಗೆ ಒಂದು ಸ್ಥಾನ ಬಿಟ್ಟುಕೊಡುವುದಾಗಿ ಹೇಳಿದ್ದಾರೆ. ಇಂಡಿಯಾ ಕೂಟದ ಭಾಗವಾಗಿರುವ ಎಎಪಿಯು ಮೈತ್ರಿ ಧರ್ಮವನ್ನು ಗಮನದಲ್ಲಿಟ್ಟುಕೊಂಡು ನಾವು ಅವರಿಗೆ ಒಂದು ಸ್ಥಾನವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.



Join Whatsapp