ಮುಂಬೈ: ಬೇಹುಗಾರಿಕೆ ಆರೋಪದಲ್ಲಿ ಕತಾರ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಭಾರತದ ಮಾಜಿ ನಾವಿಕರ ಬಿಡುಗಡೆಯಲ್ಲಿ ತನ್ನ ಪಾತ್ರವಿದೆ ಎಂದು ಬಿಜೆಪಿ ಸಂಸದ ಸುಮಣಿಯನ್ ಸ್ವಾಮಿ ಹೇಳಿದ್ದನ್ನು ಬಾಲಿವುಡ್ ನಟ ಶಾರುಖ್ ಖಾನ್ ನಿರಾಕರಿಸಿದ್ದಾರೆ.
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮಾಡಿದ್ದ X ಪೋಸ್ಟ್ ವ್ಯಾಪಕ ವೈರಲ್ ಆಗುತ್ತಿರುವ ಬೆನ್ನಲ್ಲೇ ಶಾರುಖ್ ಖಾನ್ ಅವರ ಕಚೇರಿಯು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ‘ಕತಾರ್ನಿಂದ ಎಂಟು ನೌಕಾಪಡೆಯ ಪುರುಷರ ಬಿಡುಗಡೆಗೆ ಸಹಾಯ ಮಾಡುವಲ್ಲಿ ಶಾರುಖ್ ಖಾನ್ ಅವರ ಯಾವುದೇ ಪಾಲ್ಗೊಳ್ಳುವಿಕೆ ಇಲ್ಲ ಎಂದು ಹೇಳಿದೆ.
ಯುಎಇ ಮತ್ತು ಕತಾರ್ ಭೇಟಿಯ ಕುರಿತು ಪ್ರಧಾನಿ ಮೋದಿ ಮಾಡಿದ ಎಕ್ಸ್ ಪೋಸ್ಟಿಗೆ ಪ್ರತಿಕ್ರಿಯಿಸಿದ್ದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ‘ಕತಾರ್‌ನ ಶೇಖ್‌ಗಳನ್ನು ಮನವೊಲಿಸಲು ವಿದೇಶಾಂಗ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರರು ವಿಫಲವಾದ ನಂತರ ಮೋದಿ ಅವರು ಸಿನಿಮಾ ತಾರೆ ಶಾರುಕ್ ಖಾನ್ ಅವರಿಗೆ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿಕೊಂಡರು. ಹೀಗಾಗಿ, ನಮ್ಮ ನೌಕಾ ಅಧಿಕಾರಿಗಳನ್ನು ಬಿಡುಗಡೆ ಮಾಡಲು ಕತಾರ್ ಶೇಖ್‌ಗಳೊಂದಿಗೆ ದುಬಾರಿ ಒಪ್ಪಂದವನ್ನು ಕುದುರಿಸಿಕೊಂಡರು ಎಂದು ಪೋಸ್ಟ್ ಮಾಡಿದ್ದರು.
ಶಾರುಖ್ ಖಾನ್ ಕಚೇರಿ ಹೇಳಿಕೆಯಲ್ಲಿ, ಈ ಯಶಸ್ವಿ ನಿರ್ಣಯದ ಕಾರ್ಯಗತಗೊಳಿಸುವಿಕೆಯು ಕೇವಲ ಭಾರತ ಸರ್ಕಾರದ ಅಧಿಕಾರಿಗಳ ಮೇಲೆ ಮಾತ್ರ ನಿಂತಿದೆ ಮತ್ತು ಈ ವಿಷಯದಲ್ಲಿ ಶಾರುಖ್ ಖಾನ್ ಅವರ ಭಾಗವಹಿಸುವಿಕೆಯನ್ನು ನಾವು ನಿಸ್ಸಂದಿಗ್ಧವಾಗಿ ನಿರಾಕರಿಸುತ್ತೇವೆ ಎಂದು ಹೇಳಿದೆ.