ಬೆಂಗಳೂರು: ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಅಕ್ಷರಗಳು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ವಿಧಾನಸಭೆಯಲ್ಲಿ ನಿನ್ನೆ ಮಂಡನೆಯಾಯಿತು.
2022 ರ ವಿಧೇಯಕಕ್ಕೆ ತಿದ್ದುಪಡಿ ಮಸೂದೆ ಇದಾಗಿದ್ದು, ವಾಣಿಜ್ಯ, ಕೈಗಾರಿಕೆ, ಉದ್ಯಮ, ಆಸ್ಪತ್ರೆಗಳು, ಪ್ರಯೋಗಾಲಯಗಳು, ಹೋಟೆಲ್‌ಗಳು ಸೇರಿದಂತೆ ಎಲ್ಲಾ ನಾಮಫಲಕಗಳಲ್ಲಿಯೂ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಲಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೆ ಕರ್ನಾಟಕ ಸಚಿವ ಸಂಪುಟ ಜನವರಿ 5 ರಂದು ಅನುಮೋದನೆ ನೀಡಿತ್ತು.
ಕನ್ನಡಕ್ಕೆ ಪ್ರಾಧಾನ್ಯತೆ ನೀಡುತ್ತಿಲ್ಲ ಎಂದು ಬೆಂಗಳೂರಿನ ಕೆಲವು ಉದ್ಯಮಗಳು ಮತ್ತು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಕನ್ನಡ ಪರ ಸಂಘಟನೆಗಳು ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಈ ಸುಗ್ರೀವಾಜ್ಞೆಯ ಭರವಸೆ ಸರ್ಕಾರ ನೀಡಿತ್ತು.