ತೆರಿಗೆ ಪಾವತಿಸದ ಆರೋಪ: ಬೆಂಗಳೂರಿನ ರಾಕ್ ಲೈನ್ ಮಾಲ್ ಗೆ ಬೀಗ ಜಡಿದ ಅಧಿಕಾರಿಗಳು!

Prasthutha|

ಬೆಂಗಳೂರು: ಬಾಕಿ ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಒಡೆತನದ ರಾಕ್ ಲೈನ್ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ.

- Advertisement -


ಕಂದಾಯ ಅಧಿಕಾರಿಗಳು ಈಗ ಮಾಲ್ ಅನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ತೆರಿಗೆಯನ್ನು ಪಾವತಿಸಿಲ್ಲ ಎಂದು ಆರೋಪಿಸಲಾಗಿದೆ.



Join Whatsapp