ರೈತರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿ: ಮಾಯಾವತಿ

Prasthutha|

ಲಖನೌ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸರ್ಕಾರವು ಕ್ರಮಗಳನ್ನು ಕೈಗೊಳ್ಳುವ ಬದಲು, ಅವರೊಂದಿಗೆ ಮಾತುಕತೆ ನಡೆಸಬೇಕು ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

- Advertisement -


ಕೃಷಿ ಉತ್ಪನ್ನಗಳಿಗೆ ‘ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನಿನ ಖಾತರಿ’ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾವಿರಾರು ರೈತರು ‘ದೆಹಲಿ ಚಲೊ’ ಪ್ರತಿಭಟನಾ ಮೆರವಣಿಗೆಯನ್ನು ಮಂಗಳವಾರ ಆರಂಭಿಸಿದ್ದಾರೆ. ಭಾರತವನ್ನು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಯನ್ನಾಗಿಸಿರುವ ಶ್ರಮಿಕ ರೈತರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಯಾವತಿ ಹೇಳಿದ್ದಾರೆ.



Join Whatsapp