ನವದೆಹಲಿ: ಜೂನ್ ತಿಂಗಳಲ್ಲಿ ವೆಸ್ಟ್ ಇಂಡೀಸ್ ಹಾಗೂ ಯುಎಸ್ಎ ಆತಿಥ್ಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ಗೆ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಆಗಿರಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ತಿಳಿಸಿದ್ದಾರೆ. ಬಿಸಿಸಿಐ ಈ ಬಗ್ಗೆ ಅಧಿಕೃತವಾಗಿ ಪ್ರಕಟಿಸಿಲ್ಲ.
ರಾಜ್ಕೋಟ್ನಲ್ಲಿರುವ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂ ಮರುನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
ನಾವು 2023ರ ODI ವಿಶ್ವಕಪ್ನ ಫೈನಲ್ನಲ್ಲಿ ಸೋತಿದ್ದೇವೆ ನಿಜ. ಆದರೆ ನಾವು ಸತತ 10 ಪಂದ್ಯಗಳನ್ನು ಗೆದ್ದಿದ್ದೇವೆ. ಈ ಮೂಲಕ ಜನರ ಹೃದಯ ಗೆದ್ದಿದ್ದೇವೆ. ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತವು 2024 ರ ಟಿ 20 ವಿಶ್ವಕಪ್ ಗೆಲ್ಲಲಿದೆ ಎನ್ನುವ ವಿಶ್ವಾಸವಿದೆ ಎಂದು ಜಯ್ ಷಾ ಹೇಳಿದ್ದಾರೆ. ಈ ಮೂಲಕ ಟೀಂ ಇಂಡಿಯಾದ ನಾಯಕತ್ವ ಸಂಬಂಧವಾಗಿ ಎದ್ದಿರುವ ವದಂತಿಗಳಿಗೆ ತೆರೆ ಎಳೆಯುವ ಕೆಲಸ ಮಾಡಿದ್ದಾರೆ.