ಸ್ಥಳೀಯ ಸಂಸ್ಥೆಗಳನ್ನು ಸ್ವಯಂ ಆಡಳಿತ ಸಂಸ್ಥೆಗಳನ್ನಾಗಿ ರೂಪಿಸಲಾಗುವುದು: ಸಚಿವ ಪ್ರಿಯಾಂಕ್ ಖರ್ಗೆ

Prasthutha|

ಬೆಂಗಳೂರು: ಸ್ಥಳೀಯ ಸಂಸ್ಥೆಗಳನ್ನು ಸ್ವಯಂ ಆಡಳಿತ ಸಂಸ್ಥೆಗಳನ್ನಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

- Advertisement -


ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾನೂನಿನಲ್ಲಿರುವ ಎಲ್ಲ ಅಧಿಕಾರ ಹಾಗೂ ಹಣಕಾಸನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸುವ ಕುರಿತಂತೆ ನಿಯಮ 330 ರಡಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಮಂಡಿಸಿದ ಸೂಚನೆಗೆ ಪ್ರಿಯಾಂಕ್ ಖರ್ಗೆ ಮೇಲಿನಂತೆ ಉತ್ತರಿಸಿದ್ದಾರೆ. ಸ್ಥಳೀಯ ಸಂಸ್ಥೆಗಳನ್ನು ಸ್ವಯಂ ಆಡಳಿತ ಸಂಸ್ಥೆಗಳನ್ನಾಗಿ ರೂಪಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮಾಂತರ ಪ್ರದೇಶದ ಜನರ ಜೀವನಮಟ್ಟ ಸುಧಾರಿಸಲು ಹಾಗೂ ಮೂಲ ಸೌಕರ್ಯ ಒದಗಿಸಲು ಆಯಾ ಗ್ರಾಮ ಪಂಚಾಯತಿಗಳಿಗೆ ಅಧಿಕಾರ ನೀಡಲಾಗಿದೆ ಎಂದರು.


ಉದ್ಯೋಗ ಖಾತ್ರಿ ಯೋಜನೆ, 15 ನೇ ಹಣಕಾಸು ಯೋಜನೆ, ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಅಭಿಯಾನ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬಾಪುಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಿ ಸುಮಾರು 72 ಸೇವೆಗಳನ್ನು ನೀಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಗಾಮ ಪಂಚಾಯತಿಗಳ ಕಾರ್ಯನಿರ್ವಹಣೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಉತ್ತಮ ಸಾಧನೆ ಮಾಡಿದ ಗ್ರಾಮ ಪಂಚಾಯತಿಗಳಿಗೆ 5 ಲಕ್ಷ ರೂ.ಪ್ರೋತ್ಸಾಹ ಧನವನ್ನು ಗಾಂಧಿ ಗ್ರಾಮ ಪ್ರೋತ್ಸಾಹ ಯೋಜನೆಯಡಿ ಬಿಡುಗಡೆ ಮಾಡಲಾಗುತ್ತಿದೆ ಎಂದರು.



Join Whatsapp