ಜಮ್ಮು ಕಾಶ್ಮೀರದಲ್ಲಿ ನಮ್ಮ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ: ಫಾರೂಕ್ ಅಬ್ದುಲ್ಲಾ

Prasthutha|

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಫಾರೂಕ್ ಅಬ್ದುಲ್ಲಾರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

- Advertisement -


ಈ ನಿರ್ಧಾರವು ಇಂಡಿಯಾ ಮೈತ್ರಿಕೂಟ(I.N.D.I.A)ಕ್ಕೆ ದೊಡ್ಡ ಹೊಡೆತ ಎಂದೇ ಹೇಳಬಹುದು. ಇದರ ನಡುವೆ ಜಮ್ಮು ಕಾಶ್ಮೀರದಿಂದ ಫಾರೂಕ್ ಅಬ್ದುಲ್ಲಾ ಇಂಡಿಯಾ ಜತೆ ಕೈಜೋಡಿಸದೆ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿಯೂ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಮಾತುಕತೆ ನಡೆಯುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಫಾರೂಕ್ ಅಬ್ದುಲ್ಲಾ ಅವರ ಈ ನಿರ್ಧಾರ I.N.D.I.A ಮೈತ್ರಿಯನ್ನು ಮತ್ತಷ್ಟು ದುರ್ಬಲಗೊಳಿಸಲಿದೆ.



Join Whatsapp