ನವದೆಹಲಿ: ಪೇಂಟ್ ತಯಾರಿಕೆ ಕಾರ್ಖಾನೆಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ದೆಹಲಿಯ ಹೊರವಲಯದ ಅಲಿಪುರದಲ್ಲಿ ನಡೆದಿದೆ.
ಅಲಿಪುರದ ದಯಾಲ್ ಪುರ ಮಾರುಕಟ್ಟೆಯಲ್ಲಿರುವ ಕಾರ್ಖಾನೆಯಲ್ಲಿ ಸುಟ್ಟು ಕರಕಲಾದ 11 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಜತೆಗೆ ರಕ್ಷಣಾ ಕಾರ್ಯಾಚರಣೆಯ ವೇಳೆ ಗಾಯಗೊಂಡಿದ್ದ ಒಬ್ಬ ಪೊಲೀಸ್ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.