ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಕರ್ನಾಟಕ ಬಜೆಟ್ 2024ನ್ನು ಮಂಡಿಸಿದ ಸಿಎಂ ಸಿದ್ದರಾಮಯ್ಯ ಪ್ರವಾಸೋಧ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿದ್ದು, 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ ನಿರ್ಮಿಸಲಾಗುವುದು ಎಂದು ಹೇಳಿದರು.

- Advertisement -


ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿವೆ. ಇವುಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ. ಒದಗಿಸಲಾಗುವುದು ಎಂದು ಹೇಳಿದರು. ಇದಲ್ಲದೆ ರಾಜ್ಯದ 10 ಪ್ರವಾಸಿತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗಿದೆ. 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ನಿಧಿ ಮೀಸಲಿಡಲಾಗಿದೆ.



Join Whatsapp