ರಾಮನಗರ: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್ ಟೇಬಲ್ ಶವ ಪತ್ತೆಯಾದ ಘಟನೆ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರದಲ್ಲಿ ನಡೆದಿದೆ.
ಮಂಜುಶ್ರೀ (27) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
2020-21ರಿಂದ ಪೊಲೀಸ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮಂಜುಶ್ರೀ ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಶಿವಾಜಿನಗರಕ್ಕೆ ನಿಯೋಜನೆ ಆಗಿದ್ದರು. ಕೆಲ ದಿನಗಳಿಂದ ಕೆಲಸಕ್ಕೆ ರಜೆ ಹಾಕಿದ್ದ ಮಂಜುಶ್ರೀ ನಿನ್ನೆ ರಾತ್ರಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವ ರವಾನಿಸಲಾಗಿದೆ.