ಉಡುಪಿ: ವಿದ್ಯಾರ್ಥಿಯೋರ್ವ ಆರನೇ ಮಹಡಿಯಲ್ಲಿರುವ ತರಗತಿ ಕೊಠಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಣಿಪಾಲದ ಖಾಸಗಿ ಕಾಲೇಜೊಂದರಲ್ಲಿ ನಡೆದಿದೆ.
ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್(20) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಮಾಹೆಯ ಎಂಸಿಎಚ್ ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ.
ಪರೀಕ್ಷೆಯ ವೇಳೆ ಮೊಬೈಲ್ ಫೋನ್ ಬಳಸಿದ ಕಾರಣಕ್ಕೆ ಸತ್ಯಂ ಸುಮನ್ ನನ್ನು ಪರೀಕ್ಷಾ ಮೇಲ್ವಿಚಾರಕರು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.