ಬಿಜೆಪಿ ಅಥವಾ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ: ಜನಾರ್ದನ ರೆಡ್ಡಿ

Prasthutha|

ಕೊಪ್ಪಳ: ಬಿಜೆಪಿಯನ್ನಾಗಲಿ ಕಾಂಗ್ರೆಸ್ ಪಕ್ಷವನ್ನಾಗಲಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಮೋದಿ ಮತ್ತೆ ಪ್ರಧಾನಿಯಾಗುವ ಆಸಕ್ತಿ ಹೊಂದಿದ್ದಾರೆ. ಈ ಕಾರಣಕ್ಕೆ ಕೆಆರ್ ಪಿಪಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಿದೆ. ಆದರೆ ಯಾವುದೇ ಕಾರಣಕ್ಕೆ ನಾನು ಬಿಜೆಪಿ ಸೇರುವುದಿಲ್ಲ ಎಂದಿದ್ದಾರೆ.

ವಿಧಾನಸಭೆಯಲ್ಲಿಡಿಸಿಎಂ ಡಿ.ಕೆ. ಶಿವಕುಮಾರರೊಂದಿಗೆ ಆತ್ಮೀಯವಾಗಿದ್ದೀರಲ್ಲಾ ಎಂದು ಮಾಧ್ಯಮದವರು ಕೇಳಿದಾಗ ಪ್ರತಿಕ್ರಿಯಿಸಿದ ಜನಾರ್ದನ‌ ರೆಡ್ಡಿ, ಕಳೆದ 25 ವರ್ಷದಿಂದ ಡಿ.ಕೆ. ಶಿವಕುಮಾರ್ ಮತ್ತು ನಾನು ಆತ್ಮೀಯರು. ಆದತೆ ಅವರು ನನ್ನನ್ನು ರಾಜಕೀಯವಾಗಿ ಆಹ್ವಾನ ಮಾಡಿಲ್ಲ. ನಾನು ಕಾಂಗ್ರೆಸ್ ಪಕ್ಷ ಸೇರುವುದೂ ಇಲ್ಲ ಎಂದರು.



Join Whatsapp