‘INDIA’ ಮೈತ್ರಿಕೂಟ ಸೇರಲು ಮಾಯಾವತಿಗೆ ಆಹ್ವಾನಿಸಿದ ಕಾಂಗ್ರೆಸ್

Prasthutha|

ಲಖನೌ: ‘INDIA’ ಮೈತ್ರಿಕೂಟ ಸೇರಲು ಮಾಯಾವತಿಗೆ ಉತ್ತರ ಪ್ರದೇಶ ಕ ಕಾಂಗ್ರೆಸ್ ಆಹ್ವಾನಿಸಿದೆ. ಬಿಎಸ್‌ಪಿಗೆ ಇಂಡಿಯಾ ಮೈತ್ರಿಕೂಟದ ಬಾಗಿಲು ತೆರೆದಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳಬೇಕೇ ಅಥವಾ ಬೇಡವೇ ಎಂಬುದನ್ನು ಮಾಯಾವತಿ ನಿರ್ಧರಿಸಬೇಕು ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಹೇಳಿದ್ದಾರೆ.

- Advertisement -

ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಾಯಾವತಿ ಈಗಾಗಲೇ ಘೋಷಿಸಿದ್ದಾರೆ. ಆದರೆ ಅವರು ಇಂಡಿಯಾ ಮೈತ್ರಿಕೂಟ ಸೇರಲು ನಾವು ಬಯಸುತ್ತೇವೆ ಎಂದು ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಇಂಡಿಯಾ ಮೈತ್ರಿ ಸೇರುವ ಉತ್ತರ ಪ್ರದೇಶದ ಸಣ್ಣ ಪಕ್ಷಗಳೊಂದಿಗೆ ಕಾಂಗ್ರೆಸ್-ಎಸ್‌ಪಿ ಸಂಯೋಜನೆ ಮಾತುಕತೆ ನಡೆಸುತ್ತಿದೆ ಮತ್ತು ಈ ತಿಂಗಳ ಅಂತ್ಯದ ವೇಳೆಗೆ ಎಲ್ಲವೂ ಬಗೆಹರಿಯಲಿದೆ ಎಂದು ಹೇಳಿದ್ದಾರೆ

- Advertisement -

“ಅವರಲ್ಲಿ ಕೆಲವರು ಬೇಷರತ್ತಾಗಿ ಸೇರುತ್ತಿದ್ದಾರೆ ಮತ್ತು ಕೆಲವರು ಕೆಲವು ನಿರೀಕ್ಷೆಗಳನ್ನು ಹೊಂದಿದ್ದಾರೆ ಮತ್ತು ಆದ್ದರಿಂದ ಸ್ವಲ್ಪ ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆಗೆ ಸಮಯ ತೆಗೆದುಕೊಳ್ಳುತ್ತಿದೆ. ಈ ತಿಂಗಳ ಅಂತ್ಯದ ವೇಳೆಗೆ ಎಲ್ಲವನ್ನೂ ಬಗೆಹರಿಸಲಾಗುವುದು ಎಂದು ಪಾಂಡೆ ಹೇಳಿದ್ದಾರೆ.



Join Whatsapp