ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ, 3 ಮಂದಿ ಸಜೀವ ದಹನ

Prasthutha|

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಸಜೀವ ದಹನವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಕುಂಬಳಗೋಡು ಬಳಿ ರಾಮಸಂದ್ರದಲ್ಲಿ ಘಟನೆ ನಡೆದಿದೆ.

- Advertisement -

ಬೆಂಕಿಯ ಕೆನ್ನಾಲಿಗೆಗೆ ಇಡೀ ಕಾರ್ಖಾನೆ ಧಗ ಧಗನೆ ಹೊತ್ತಿ ಉರಿದು ಹೋಗಿದೆ‌. ಮೂವರು ಪ್ರಾಣ ಕಳಕೊಂಡಿದ್ದಾರೆ ಎನ್ನಲಾಗಿದೆ.

ಸುಗಂಧ ದ್ರವ್ಯ ತಯಾರಿಸಲು ಬಳಸುವ ರಾಸಾಯನಿಕವನ್ನು ಡಬ್ಬಿಗಳಲ್ಲಿ ತುಂಬಿಡಲಾಗಿತ್ತು. ರಾಸಾಯನಿಕ ಸೋರಿಕೆಯಾಗಿ ಸ್ಫೋಟ ಸಂಭವಿಸಿದೆ.

- Advertisement -

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.



Join Whatsapp