ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅಧಿಕಾರಾವಧಿ ವಿಸ್ತರಣೆ

Prasthutha|

ನವದೆಹಲಿ: ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

- Advertisement -

ನಡ್ಡಾ ಅವರ ನಾಯಕತ್ವದಲ್ಲಿ ಪಕ್ಷವು ಹಲವು ರಾಜ್ಯಗಳಲ್ಲಿ ಯಶಸ್ಸನ್ನು ಸಾಧಿಸಿದೆ. ಈ ಯಶಸ್ಸನ್ನು ಮುಂದುವರಿಸುವ ಮೂಲಕ ಅವರ ಅಧಿಕಾರಾವಧಿಯನ್ನು ವಿಸ್ತರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಹೇಳಿದ್ದರು. ಈ ನಿರ್ಧಾರವನ್ನು ಭಾನುವಾರ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅಂಗೀಕರಿಸಸಲಾಗಿದೆ.

ಪಕ್ಷದ ಸಂಸದೀಯ ಮಂಡಳಿಯ ಅನುಮೋದನೆಯೊಂದಿಗೆ ವೈಯಕ್ತಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ನಡ್ಡಾ ಅವರಿಗೆ ನೀಡಲಾಗಿದೆ ಎಂದು ಬಿಜೆಪಿ ಹೇಳಿದೆ. 2019ರವರೆಗೆ ಅಮಿತ್ ಶಾ ಪಕ್ಷದ ಅಧ್ಯಕ್ಷರಾಗಿದ್ದರು. ಆ ನಂತರ ನಡ್ಡಾ ಪಕ್ಷದ ಅಧ್ಯಕ್ಷರ ಜವಾಬ್ದಾರಿಯನ್ನು ವಹಿಸಿಕೊಂಡರು.

- Advertisement -

ದೆಹಲಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿಯ ಪ್ರಮುಖರ ಜೊತೆಗೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.



Join Whatsapp