ಮಂಗಳೂರು: ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್ ತೆರವುಗೊಳಿಸುವಂತೆ ಡಿವೈಎಫ್ ಐ ಸಂಘಟನೆಗೆ ಕೊಣಾಜೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಫೆ.16 ರಂದು ಡಿವೈಎಫ್ಐ ಆರು ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಿತ್ತು. ಯಾವುದೇ ಅನುಮತಿ ಪಡೆಯದೇ ಅಳವಡಿಸಿರುವುದರಿಂದ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕೂಡಲೇ ಕಟೌಟ್ ತೆರವು ಮಾಡುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.