ಮಂಗಳೂರಿನ ಜೆರೋಸಾ ಶಾಲೆ ಕೇಸ್ | ಸಂಘಪರಿವಾರದ ಕಾರ್ಯಕರ್ತರಿಂದ ರಸ್ತೆ ತಡೆ: ಹಲವರು ಪೊಲೀಸ್ ವಶಕ್ಕೆ!

Prasthutha|

ಮಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೆರೋಸಾ ಶಾಲೆಯ ಶಿಕ್ಷಕಿ ಅವರನ್ನು ಬಂಧಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -


ಜೆರೋಸಾ ಶಾಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕ್ಲಾಕ್ ಟವರ್ ವೃತ್ತದಲ್ಲಿ ವಿಎಚ್ ಪಿ ಮತ್ತು ಬಜರಂಗದಳ ಕಾರ್ಯಕರ್ತರು ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದರು. ಶಾಸಕರು ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಿಸಿದ ಪೊಲೀಸರ ಕ್ರಮ ವಿರೋಧಿಸಿ ಹಾಗೂ ಶಿಕ್ಷಕಿಯನ್ನು ಬಂಧಿಸುವಂತೆ ಪ್ರತಿಭಟನೆ ನಡೆದಿತ್ತು. ಆದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಬ್ಯಾರಿಕೇಡ್ ನುಗ್ಗಿ ಬಂದ ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



Join Whatsapp