ಲೋಕಸಭಾ ಚುನಾವಣೆಯಲ್ಲಿ ಬಿಎಸ್ ಪಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ: ಮಾಯಾವತಿ

Prasthutha|

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಯು ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

- Advertisement -


ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಎಸ್ ಪಿಯನ್ನು ಇಂಡಿಯಾ ಒಕ್ಕೂಟವನ್ನು ಸೇರಿಸಿಕೊಳ್ಳಲು ಹಲವು ನಾಯಕರು ಪ್ರಯತ್ನ ನಡೆಸುತ್ತಿದ್ದರು. ಬಿಎಸ್ಪಿ ಯಾವುದೇ ಪಕ್ಷದೊಂದಿಗೆ ಯಾವುದೇ ಒಕ್ಕೂಟವನ್ನು ರಚಿಸುವುದಿಲ್ಲ ಮತ್ತು ಇದನ್ನು ಹಲವು ಬಾರಿ ಹೇಳಲಾಗಿದೆ ಎಂದು ಮಾಯಾವತಿ ಹೇಳಿದರು.


ಸಮಾಜದ ಎಲ್ಲಾ ವರ್ಗಗಳ, ವಿಶೇಷವಾಗಿ ಬಡವರು, ತುಳಿತಕ್ಕೊಳಗಾದ ಮತ್ತು ನಿರ್ಲಕ್ಷಿತರ ಯೋಗಕ್ಷೇಮ ಮತ್ತು ಕಲ್ಯಾಣವನ್ನು ಪರಿಗಣಿಸಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇವಲ ಸ್ವಂತ ಬಲವನ್ನು ಅವಲಂಬಿಸಿ ಸ್ವತಂತ್ರವಾಗಿ ಸ್ಪರ್ಧಿಸುವ ಬಿಎಸ್ಪಿಯ ನಿರ್ಧಾರವು ಅಚಲವಾಗಿದೆ ಎಂದು ಹೇಳಿದ್ದಾರೆ.



Join Whatsapp