ಮಂಗಳೂರು: ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಕಾರ್ಯಕ್ರಮಕ್ಕೆ ಭಾನುವಾರ ಮಂಗಳೂರಿಗೆ ಆಗಮಿಸಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ವಿಶೇಷ ವಿಮಾನದಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಜೊತೆಗೆ ಪ್ರಯಾಣಿಸಿರುವುದು ಚರ್ಚೆಗೆ ಕಾರಣವಾಗಿದೆ.
ಕರ್ಣಾಟಕ ಬ್ಯಾಂಕ್ ಕಾರ್ಯಕ್ರಮಕ್ಕೆ ಡಿ.ಕೆ. ಶಿವಕುಮಾರ್ ಅತಿಥಿಯಾಗಿ ಆಗಮಿಸಿದ್ದರು. ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರ ಹೆಸರು ಆಹ್ವಾನ ಪಟ್ಟಿಯಲ್ಲಿ ಇರಲಿಲ್ಲ. ಕಾರ್ಯಕ್ರಮದಲ್ಲಿ ಸಭಿಕರ ಸಾಲಿನಲ್ಲಿ ಆಸೀನರಾಗಿದ್ದ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮ ಮುಗಿದ ಬಳಿಕ ಮತ್ತೆ ಡಿಕೆಶಿ ಜೊತೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಕಳೆದ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ನಾಯಕರ ವಿರುದ್ಧ ಅಸಮಾಧನ ವ್ಯಕ್ತಪಡಿಸಿರುವ ಎಸ್.ಟಿ.ಸೋಮಶೇಖರ್ ಹಲವು ಬಾರಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಗುರುತಿಸಿಕೊಂಡು ಅವರನ್ನು ಹಾಡಿಹೊಗಲಿದ್ದಾರೆ. ನಿನ್ನೆ ಡಿಕೆಶಿ ಜೊತೆ ವಿಶೇಷ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ. ಅವರ ಈ ನಡೆಯಿಂದಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಶಂಕೆ ವ್ಯಕ್ತವಾಗಿದೆ.