ಎಎಪಿಯ ಕುಲದೀಪ್ ಕುಮಾರ್ ಚಂಡೀಗಢ ಮೇಯರ್ ಎಂದು ಘೋಷಿಸಿದ ಸುಪ್ರೀಂಕೋರ್ಟ್

Prasthutha|

►ಮತಪತ್ರಗಳನ್ನು ತಿರುಚಿದ್ದ ಚುನಾವಣಾಧಿಕಾರಿ ವಿರುದ್ಧ ಕಾನೂನು ಕ್ರಮಕ್ಕೆ ಆದೇಶ

- Advertisement -


ದೆಹಲಿ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಎಎಪಿಯ ಕುಲದೀಪ್ ಕುಮಾರ್ ವಿಜೇತ ಎಂದು ಸುಪ್ರೀಂಕೋರ್ಟ್ ಘೋಷಿಸಿದೆ.


ಮತಪತ್ರ ತಿರುಚಿದ ಆರೋಪದ ಕುರಿತು ಇಂದು(ಮಂಗಳವಾರ) ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚುನಾವಣಾ ಅಧಿಕಾರಿ ಅಸಿಂಧು ಎಂದು ಘೋಷಿಸಿದ ಮತಗಳನ್ನು ಮಾನ್ಯವೆಂದು ಪರಿಗಣಿಸಬೇಕು ಮತ್ತು ಮರುಎಣಿಕೆ ನಡೆಸಬೇಕು ಎಂದು ಹೇಳಿದೆ.

- Advertisement -


ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಕುಲದೀಪ್ ಕುಮಾರ್ ವಿರುದ್ಧ ಬಿಜೆಪಿ ಗೆಲುವು ಸಾಧಿಸಿತ್ತು.

ಚುನಾವಣಾಧಿಕಾರಿಯು ಸಮ್ಮಿಶ್ರ ಪಾಲುದಾರರ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಿದ್ದರಿಂದ ಕುಲದೀಪ್ ಸೋತಿದ್ದರು. ಇದೀಗ ಚುನಾವಣಾ ಅಧಿಕಾರಿ ಅಸಿಂಧು ಎಂದು ಘೋಷಿಸಿದ ಮತ ಅಸಿಂಧು ಅಲ್ಲ ಎಂದು ಹೇಳಿದ ನ್ಯಾಯಾಲಯ, ಎಎಪಿಯ ಕುಲದೀಪ್ ಕುಮಾರ್ ಅವರನ್ನು ಮೇಯರ್ ಎಂದು ಘೋಷಿಸಿದೆ.



Join Whatsapp