ಮಂಗಳೂರು: ಪಿಹೆಚ್​ಡಿ ವಿದ್ಯಾರ್ಥಿನಿ ನಾಪತ್ತೆ

Prasthutha|

ಮಂಗಳೂರು: ಪಿಜಿಯಲ್ಲಿದ್ದ ಪಿಹೆಚ್​ಡಿ ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

- Advertisement -

ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಹೆಚ್​ಡಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ ಚೈತ್ರಾ (27) ನಾಪತ್ತೆಯಾದವಳು.

ಫೆ.17 ರಂದು ಬೆಳಗ್ಗೆ 9 ಗಂಟೆಗೆ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದಾಕೆ ನಾಪತ್ತೆಯಾಗಿದ್ದಾಳೆ ಎಂದು ಚೈತ್ರಾಳ ದೊಡ್ಡಪ್ಪ ಉಳ್ಳಾಲ ಪೊಲೀಸ್ ಠಾಣೆಗೆ ಅದೇ ದಿನ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



Join Whatsapp