ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಫಾಲಿ ಎಸ್.ನರೀಮನ್ ನಿಧನ: ಮೋದಿ, ಖರ್ಗೆ, ರಾಹುಲ್ ಸಂತಾಪ

Prasthutha|

ನವದೆಹಲಿ: ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ಫಾಲಿ ಎಸ್. ನರೀಮನ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

- Advertisement -


‘ದೇಶದ ಪ್ರಮುಖ ಕಾನೂನು ತಜ್ಞರಲ್ಲಿ ಫಾಲಿ ನರೀಮನ್ ಕೂಡ ಒಬ್ಬರು. ಸಾಮಾನ್ಯ ನಾಗರಿಕರಿಗೆ ನ್ಯಾಯ ಸಿಗುವಂತೆ ಮಾಡಲು ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು’ ಎಂದು ಪ್ರಧಾನಿ ಮೋದಿ ‘ಎಕ್ಸ್’ನಲ್ಲಿ ಸಂತಾಪ ಸೂಚಿಸಿದ್ದಾರೆ.


‘ಪದ್ಮ ವಿಭೂಷಣ ಪುರಸ್ಕೃತರಾದ ನರೀಮನ್ ಅವರು ತಮ್ಮ ತತ್ವ ಸಿದ್ದಾಂತಗಳಿಗೆ ಬದ್ದರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಮಲ್ಲಿಕಾರ್ಜುನ ಖರ್ಗೆ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
‘ಅವರು ವಾದಿಸಿರುವ ಪ್ರಕರಣಗಳು ಐತಿಹಾಸಿಕ ಹೆಗ್ಗುರುತಾಗಿರುವುದು ಮಾತ್ರವಲ್ಲದೇ ಸಂವಿಧಾನದ ಪಾವಿತ್ರ್ಯವನ್ನು ಎತ್ತಿಹಿಡಿಯಲು ಇಂದಿನ ಪೀಳಿಗೆಯ ವಕೀಲರಿಗೆ ಅಥವಾ ನ್ಯಾಯಾಧೀಶರಿಗೆ ಸ್ಪೂರ್ತಿ ಮತ್ತು ಪ್ರೇರಣೆ ನೀಡಿವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

70 ವರ್ಷಕ್ಕೂ ಹೆಚ್ಚಿನ ಕಾಲ ವಕೀಲಿಕೆ ಮಾಡಿದ್ದ ಅವರು, ದೇಶದ ಪ್ರಮುಖ ವಕೀಲರಲ್ಲಿ ಓರ್ವರಾಗಿದ್ದರು. 1950ರಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ವಕೀಲಿಕೆ ಆರಂಭಿಸಿದ್ದ ಅವರು, 1972ರಲ್ಲಿ ದೇಶದ ಹೆಚ್ಚುವರಿ ಸಾಲಿಸಿಟರ್‌ ಜನರಲ್ ಆಗಿಯೂ ಕಾರ್ಯನಿರ್ವಹಿಸಿದ್ದರು.



Join Whatsapp