ಕನಕಪುರ: ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಜೆಡಿಎಸ್ ಪಕ್ಷ ಮತ್ತು ಅದರ ನಾಯಕ ಹೆಚ್ ಡಿ ಕುಮಾರಸ್ವಾಮಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಕೀಲರ ಪ್ರತಿಭಟನೆ, ದಲಿತರ ಪ್ರತಿಭಟನೆ ಹಾಗೂ ಇತರ ಸಂಘರ್ಷಗಳ ಬಗ್ಗೆ ಕನಕಪುರದಲ್ಲಿ ಬುಧವಾರ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಅಲ್ಲಿ (ರಾಮನಗರದಲ್ಲಿ) ನಡೆಯುತ್ತಿರುವ ಎಲ್ಲ ಗಲಾಟೆಗಳಿಗೆ ಕುಮಾರಸ್ವಾಮಿ ಅವರೇ ನೇರ ಕಾರಣ ಎಂದು ಹೇಳಿದ್ದಾರೆ. ರಾಮನಗರ ಪಿಎಸ್ ಐ ಸಸ್ಪೆಂಡ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ನಾನೂ ಕೂಡ ಹೇಳಿದ್ದೆ. ಶಾಸಕರೂ ಕಾನೂನು ಪ್ರಕಾರ ಕೈಗೊಳ್ಳಿ ಎಂದಿದ್ದರು. ಈ ಬಗ್ಗೆ ತನಿಖೆ ಮಾಡಿ ತಪ್ಪಿದ್ರೆ ಕ್ರಮ ತಗೊಳ್ಳಿ ಎಂದು ನಾವು ಅಧಿಕಾರಿಗಳಿಗೆ ಹೇಳಿದ್ದೆವು. ಇಲ್ಲಿ ಯಾರಿಗೂ ಅನ್ಯಾಯ ಆಗಬಾರದು ಅಂತ ಹೇಳಿದ್ದೆ. ಈ ವಿಚಾರದಲ್ಲಿ ಬಿಜೆಪಿ – ಜೆಡಿಎಸ್ನವರು ರಾಜಕೀಯ ಮಾಡ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ, ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ ಎಂದು ಹೇಳಿದರು.