ಸರ್ಕಾರಿ ಕೆಲಸ ಕೊಡಿಸೋದಾಗಿ ಲಕ್ಷ ಲಕ್ಷ ವಂಚನೆ: ದಂಪತಿ ಅರೆಸ್ಟ್

Prasthutha|

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವ ಆಸೆ ತೋರಿಸಿ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಪೋಲಿಸರು ಬಂಧಿಸಿದ್ದಾರೆ.

- Advertisement -


ಬಂಧಿತ ದಂಪತಿಯನ್ನು ಪ್ರಕಾಶ್ ಹಾಗೂ ಮಧು ಎಂದು ಗರುತಿಸಲಾಗಿದೆ.


ನಮಗೆ ದೊಡ್ಡ ದೊಡ್ಡ ವ್ಯಕ್ತಿಗಳು, ವಿವಿಧ ಇಲಾಖೆಗಳ ಮುಖ್ಯಸ್ಥರು ಪರಿಚಯವಿದ್ದಾರೆ. ಅವರ ಕಡೆಯಿಂದ ಖಾಲಿ ಇರುವ ಹುದ್ದೆಗಳನ್ನು ಕೊಡಿಸುತ್ತೇವೆ ಎಂದು ಯುವಕರಿಂದ ದಂಪತಿ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದರು. ಬಳಿಕ ಕೆಲಸವನ್ನೂ ಕೊಡಿಸದೇ, ಹಣವನ್ನೂ ವಾಪಸ್ ಕೊಡದೆ ಜನರನ್ನು ವಂಚಿಸುತ್ತಿದ್ದರು.6 ಲಕ್ಷ ರೂ. ವಂಚಿಸಿದ್ದಾರೆ ಎಂದು ದಂಪತಿ ವಿರುದ್ಧ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿತ್ತು. ಇದೀಗ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.



Join Whatsapp