ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಣೆ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Prasthutha|

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲ ಸರ್ಕಾರೀ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಮೂರು ದಿನ ಬಹುಪೋಷಕಾಂಶಯುಕ್ತ ರಾಗಿಮಾಲ್ಟ್ ಬೆರೆಸಿದ ಹಾಲನ್ನು ನೀಡುವ ಯೋಜನೆಗೆ ಚಾಲನೆ ನೀಡಿದರು.

- Advertisement -


ಸುಮಾರು 59 ಲಕ್ಷ ಮಕ್ಕಳಿಗೆ ರಾಗಿಮಾಲ್ಟ್ ಯುಕ್ತ ಹಾಲು ಒದಗಿಸುವ ಯೋಜನೆ ಉದ್ಘಾಟಿಸಿದ ಬಳಿಕ ಮುಖ್ಯಮಂತ್ರಿಯವರು ಸರ್ಕಾರೀ ಶಾಲೆಯೊಂದರ ಕೆಲ ಮಕ್ಕಳನ್ನು ವೇದಿಕೆಗೆ ಕರೆದು ರಾಗಿಮಾಲ್ಟ್ ಬೆರೆಸಿದ ಹಾಲು ವಿತರಿಸಿದರು.


2013 ರಲ್ಲಿ ನಮ್ಮ ಸರಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ಮೂ ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ ಎಂದು ಸಿಎಂ ಹೇಳಿದ್ದಾರೆ.



Join Whatsapp