ಉಳ್ಳಾಲ | ದುಬೈನಲ್ಲಿ ರಸ್ತೆ ಅಪಘಾತ: ತಾ.ಪಂ ಮಾಜಿ ಉಪಾಧ್ಯಕ್ಷೆಯ ಪುತ್ರಿ ಮೃತ್ಯು

Prasthutha|


ಉಳ್ಳಾಲ: ದುಬೈನಲ್ಲಿ ರಸ್ತೆ ಅಪಘಾತ ಸಂಭವಿಸಿ ಕೋಟೆಕಾರು ಬೀರಿ ನಿವಾಸಿ ವಿದಿಶಾ (28) ಮೃತಪಟ್ಟಿದ್ದಾರೆ.

- Advertisement -

ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿಯಾಗಿರುವ ವಿದಿಶಾ ಒಂದು ವರ್ಷ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಬಳಿಕ 2019ರಲ್ಲಿ ದುಬೈಗೆ ತೆರಳಿದ್ದರು.

ಗುರುವಾರ ತನ್ನ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ‌ ಗಂಭೀರ ಸ್ಥಿತಿಯಲ್ಲಿದ್ದ ವಿದಿಶಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.



Join Whatsapp