ವಿಪಕ್ಷ ನಾಯಕ ಹುದ್ದೆಗೆ ಆರ್ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

Prasthutha|

- Advertisement -

ಉಡುಪಿ: ವಿಧಾನಸಭೆ ಪ್ರತಿಪಕ್ಷ ನಾಯಕನಾಗಲು ಆರ್ ಅಶೋಕ್ ನಾಲಾಯಕ್ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಶುಕ್ರವಾರ ವಾಗ್ದಾಳಿ ನಡೆಸಿದರು.

ಬಿಜೆಪಿ ರಾಜ್ಯಾಧ್ಯಕ್ಷರು ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕ ಹುದ್ದೆಯಿಂದ ತೆಗೆದು ಹಾಕಬೇಕು. ಮಂಡ್ಯದಲ್ಲಿ ಬಿಜೆಪಿ ಒಂದೇ ಒಂದು ಸ್ಥಾನ ಗೆಲ್ಲದಿರಲು ಆರ್ ಅಶೋಕ್ ಕಾರಣ. ಕರ್ನಾಟಕದ ಯಾವ ಜಿಲ್ಲೆಯಲ್ಲೂ ಆರ್ ಅಶೋಕ್ ಹಿಂದೂಗಳಿಗೆ ಬೆಂಬಲ ಕೊಟ್ಟಿಲ್ಲ. ಈ ವಿಚಾರವನ್ನು ಖಂಡಿಸುತ್ತೇನೆ, ವಿರೋಧಿಸುತ್ತೇನೆ. ಅವರನ್ನು ಅಮಾನತು ಮಾಡಲು ಪಕ್ಷಕ್ಕೆ ಒತ್ತಾಯ ಮಾಡುತ್ತೇನೆ ಎಂದು ಮುತಾಲಿಕ್ ಹೇಳಿದ್ದಾರೆ.



Join Whatsapp