ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಯಲ್ಲೇ ಇರುತ್ತಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಮಲತಾ ಬಿಜೆಪಿಯಲ್ಲಿ ಇರುತ್ತಾರೆ ಎಂದಷ್ಟೇ ಪ್ರತಿಕ್ರಿಯಿಸಿದರು.
ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ. ಬಿಜೆಪಿ ರಾಜ್ಯ ಘಟಕ ಮತ್ತು ಜೆಡಿಎಸ್ ರಾಜ್ಯ ಘಟಕದೊಂದಿಗೆ ಇಷ್ಟರಲ್ಲೇ ಹೈಕಮಾಂಡ್ ಮಾತುಕತೆ ನಡೆಸಲಿದೆ. ಬಳಿಕವೇ ಟಿಕೆಟ್ ಹಂಚಿಕೆಯಾಗಲಿದೆ ಎಂದು ಹೇಳಿದರು.