ಉತ್ತರ ಪ್ರದೇಶ: ಗಂಗಾಸ್ನಾನಕ್ಕೆ ತೆರಳುತ್ತಿದ್ದ 15 ಜನ ಕೊಳಕ್ಕೆ ಬಿದ್ದು ಮೃತ್ಯು

Prasthutha|

ಲಖನೌ: ಗಂಗಾಸ್ನಾನಕ್ಕೆ ತೆರಳುತ್ತಿದ್ದ ಭಕ್ತರ ಟ್ರ್ಯಾಕ್ಟರ್ ಟ್ರಾಲಿ ಕೊಳಕ್ಕೆ ಬಿದ್ದು 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.

- Advertisement -


ಮೃತ ಪಟ್ಟವರ ಪೈಕಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು ಈ ದುರಂತ ಸಂಭವಿಸಿದೆ.
ಗಾಯಗೊಂಡಿರುವ ಸುಮಾರು 20 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.



Join Whatsapp