ಇಟಾನಗರ: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷಾಂತರ ಜೋರಾಗುತ್ತಿದ್ದು, ಅರುಣಾಚಲ ಪ್ರದೇಶದಲ್ಲಿ ನಾಲ್ವರು ಶಾಸಕರು ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.
ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಹಾಗೂ ಎನ್ಪಿಪಿಯ ತಲಾ ಇಬ್ಬರು ಶಾಸಕರು ಬಿಜೆಪಿ ಸೇರಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಖಂಡು ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿಯುರಾಮ್ ವಾಹ್ಗೆ ಇದ್ದರು.
ಮುಂದಿನ ದಿನಗಳಲ್ಲಿ ಇನ್ನು ಅನೇಕರು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ಹೇಳಿದೆ.