ಕಲಬುರಗಿ: ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ ಎಂದು ಕಲಬುರಗಿದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಹೇಳಿದ್ದಾರೆ.
ಕಲಬುರಗಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ 65 ಸಾವಿರ ಕೋಟಿ ಹಣ ಖರ್ಚಾಗುತ್ತಿದೆ. ಎಲ್ಲ ಹೆಣ್ಣು ಮಕ್ಕಳು ಸರ್ಕಾರಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಉಚಿತ ಅಕ್ಕಿ, ತಲಾ ಎರಡು ಸಾವಿರ ಹಣ ಮಹಿಳೆಯರ ಖಾತೆ ಹಾಕುತ್ತಿದ್ದೇವೆ. ಇದರಿಂದ ಬಹಳಷ್ಟು ಖರ್ಚು ಆಗುತ್ತಿದೆ, ಇದರಿಂದ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದರು.
ಆದರೂ ನಿಮ್ಮ ನಿರೀಕ್ಷೆ ಹುಸಿಗೊಳಿಸದಂತೆ ಕೆಲಸ ಮಾಡುತ್ತಿದ್ದೇವೆ. ಐದು ವರ್ಷದಲ್ಲಿ ಎಲ್ಲ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ ಎಂದರು.