ಬೆಂಗಳೂರು: ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾ.ಪಂ. ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.
ತನ್ನ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ.
ಜೊತೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೀಪ್ ಈಶ್ವರ್ ಅವರು ಪ್ರತಾಪ್ ಸಿಂಹರನ್ನು ನಿಂದಿಸಿರುವ, ಮಾಧ್ಯಮದಲ್ಲಿ ಪ್ರಸಾರವಾದ ವಿಡಿಯೋ ಸಾಕ್ಷಿಯನ್ನೂ ಕೂಡ ಪೇನ್ಡ್ರೈವ್ ಮೂಲಕ ಸಲ್ಲಿಸಿದ್ದಾರೆ. ಹಾಗೂ ದಿನಪತ್ರಿಕೆಗಳಲ್ಲಿ ಬಂದಿರುವ ಹೇಳಿಕೆಗಳನ್ನೂ ಸಹ ಸಾಕ್ಷಿಯಂತೆ ನೀಡಿದ್ದಾರೆ.