ಪಾಕ್ ಪರ ಘೋಷಣೆ ಸಾಬೀತಾದರೆ ಕ್ರಮ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.



Join Whatsapp