ರಾಮನಗರ: ಶೀಘ್ರದಲ್ಲೇ ಸರ್ಕಾರದ 6ನೇ ಗ್ಯಾರಂಟಿ ಘೋಷಣೆ ಮಾಡಲಾಗುವುದು. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಆಶಾಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗಾಗಿ 6ನೇ ಗ್ಯಾರಂಟಿ ಹೇಳಿದ್ದಾರೆ.
ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡ್ತೇವೆ. ಶೀಘ್ರದಲ್ಲೇ 6ನೇ ಗ್ಯಾರಂಟಿ ಘೋಷಣೆ ಆಗಲಿದೆ ಎಂದು ಹೇಳಿದರು.
ಕಳೆದ 5 ವರ್ಷದಿಂದ ಸಂಸದ ಡಿ.ಕೆ.ಸುರೇಶ್ ನಿಮ್ಮ ಸೇವೆ ಮಾಡಿದ್ದಾರೆ. ರಾಜಕಾರಣದಲ್ಲಿ ಅಧಿಕಾರ ಸಿಕ್ಕಾಗ ಜನಸೇವೆ ಮಾಡುವವರು ಬೆರಳೆಣಿಕೆ ಮಂದಿ. ಅದರಲ್ಲಿ ಡಿ.ಕೆ.ಸುರೇಶ್ ಕೂಡಾ ಒಬ್ಬರು. ಕಾಂಗ್ರೆಸ್ ಅಂದ್ರೆ ಬದ್ಧತೆ. ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜಾರಿ ಮಾಡಿ ನುಡಿದಂತೆ ನಡೆದಿದೆ ಎಂದರು.