ನೈಜೀರಿಯಾ | ಬಂದೂಕುದಾರಿಗಳಿಂದ 317 ವಿದ್ಯಾರ್ಥಿನಿಯರ ಅಪಹರಣ

Prasthutha|

- Advertisement -

ಲಾಗೋಸ್‌: ‘ಉತ್ತರ ನೈಜೀರಿಯಾದ ವಸತಿ ಶಾಲೆಯೊಂದರ 317 ಬಾಲಕಿಯರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದ್ದು, ಪೊಲೀಸ್‌ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ’ ಎಂದು ಪೊಲೀಸ್ ವಕ್ತಾರ ಮೊಹಮ್ಮದ್‌ ಶೇಷು ಮಾಹಿತಿ ನೀಡಿದ್ದಾರೆ.

- Advertisement -

‘ನನ್ನ 10 ಮತ್ತು 13 ವರ್ಷದ ಮಕ್ಕಳಿಬ್ಬರನ್ನೂ ಅಪಹರಿಸಲಾಗಿದೆ. ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂಬುದು ನಿರಾಶಾದಾಯಕವಾಗಿದೆ’ ಎಂದು ಪೋಷಕರೊಬ್ಬರು ಹೇಳಿದರು.

‘ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ ಅವರ ಪೋಷಕರ ಬಳಿ ತಲುಪಿಸುವುದು ನಮ್ಮ ಮೂಲ ಉದ್ದೇಶವಾಗಿದೆ. ಹಣಕ್ಕಾಗಿ ಮುಗ್ಧ ಶಾಲಾ ಮಕ್ಕಳನ್ನು ಅಪಹರಿಸಿ, ಬೆದರಿಕೆಯೊಡ್ಡುವ ಬಂಡುಕೋರರಿಗೆ ನಾವು ಹೆದರುವುದಿಲ್ಲ’ ಎಂದು ನೈಜೀರಿಯಾದ ಅಧ್ಯಕ್ಷ ಮೊಹಮ್ಮದು ಬುಹಾರಿ ಅವರು ತಿಳಿಸಿದ್ದಾರೆ.

ಈ ಕೃತ್ಯಕ್ಕೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರು ಖಂಡನೆ ವ್ಯಕ್ತಪಡಿಸಿದ್ದು,’ ಆದಷ್ಟು ಬೇಗ ಬಾಲಕಿಯರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

Join Whatsapp