ಬೆಂಗಳೂರಿನ ಕೆಫೆಯಲ್ಲಿ ಸ್ಫೋಟ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Prasthutha|

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ್ದು, ಮಹಿಳೆ ಸೇರಿದಂತೆ ಐವರಿಗೆ ಗಾಯಗಳಾಗಿದೆ.

- Advertisement -

ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಇದೊಂದು ಸುಧಾರಿತ ಸ್ಪೋಟ ಪ್ರಕರಣವಾಗಿದೆ. ಇಂತಹ ಘಟನೆಗಳು ನಡೆಯಬಾರದು, ತನಿಖೆ ನಡೆಸುತ್ತಿದ್ದಾರೆ. ಗೃಹ ಸಚಿವ ಪರಮೇಶ್ವರ್ ರಿಂದ ಮಾಹಿತಿ ಪಡೆದಿದ್ದೇನೆ ಎಂದರು.


ಸದ್ಯ ಸಿಸಿಟಿವಿ ಪರಿಶೀಲನೆ ನಡೆಯುತ್ತಿದೆ. ಯಾರೋ ಒಬ್ಬರು ಬ್ಯಾಗ್ ಇಟ್ಟಿರುವುದು ತಿಳಿದಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಟೆರರಿಸ್ಟ್ ಮಾಡಿರುವ ಬಗ್ಗೆ ಇನ್ನು ಗೊತ್ತಿಲ್ಲ. ಸ್ವಲ್ಪ ಸಮಯದಲ್ಲೇ ಸಂಪೂರ್ಣ ಮಾಹಿತಿ ಗೊತ್ತಾಗುತ್ತದೆ. ಸ್ಫೋಟಕ ಭಾರೀ ಪ್ರಮಾಣದಲ್ಲಿ ನಡೆದಿಲ್ಲ. ಸಣ್ಣ ಪ್ರಮಾಣದದ್ದರೂ ಅದು ಪರಿಣಾಮಕಾರಿಯಾಗಿದೆ ಎಂದಿದ್ದಾರೆ.



Join Whatsapp