ಬೆಂಗಳೂರು: ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಆರೋಪಿಸಲ್ಪಟ್ಟ ನಟ ದರ್ಶನ್ಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ಉತ್ತರಿಸುವಂತೆ ಆಯೋಗ ಸೂಚಿಸಿದೆ.
ಕಾಟೇರ ಸಿನಿಮಾದ 50ನೇ ದಿನದ ಸಂಭ್ರಮಾಚರಣೆ ಹಾಗೂ ಡಿ ಪರ್ವ 25 ಕಾರ್ಯಕ್ರಮದಲ್ಲಿ ದರ್ಶನ್ ಇವತ್ತು ಇವಳು ಇರುತ್ತಾಳೆ, ನಾಳೆ ಅವಳು ಬರ್ತಾಳೆ ಎಂದು ಹೇಳಿದ್ದರು.
ಇದನ್ನು ಖಂಡಿಸಿ ಗೌಡತಿಯರ ಸಂಘ ಮಹಿಳಾ ಆಯೋಗಕ್ಕೆ ದೂರು ನೀಡಿತ್ತು.
ದೂರನ್ನು ಆಧರಿಸಿ ದರ್ಶನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ರಾಜ್ಯ ಮಹಿಳಾ ಆಯೋಗವು ಒಂದು ವಾರದೊಳಗೆ ವಿವರಣೆ ನೀಡುವಂತೆ ಜಾರಿ ಮಾಡಲಾಗಿರುವ ನೋಟಿಸ್ನಲ್ಲಿ ಸೂಚಿಸಲಾಗಿದೆ.
ದರ್ಶನ್ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹೆಣ್ಣು ಮಕ್ಕಳಿಗೆ ದರ್ಶನ್ ಅವಮಾನ ಮಾಡಿದ್ದಾರೆ ಪ್ರತಿಭಟನೆ ನಡೆಸಿದ್ದರು.