ಪ್ರಧಾನಿ ಮೋದಿ ಜತೆ ಮಮತಾ ಬ್ಯಾನರ್ಜಿ ಮಾತುಕತೆ

Prasthutha|

ಪಶ್ಚಿಮ ಬಂಗಾಳ: ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಜೆ ರಾಜಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

- Advertisement -

ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಮಮತಾ‌ ಬ್ಯಾನರ್ಜಿ, ರಾಷ್ಟ್ರಪತಿ, ಪ್ರಧಾನ ಮಂತ್ರಿ ರಾಜ್ಯಕ್ಕೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡುವುದು, ಮನುಷ್ಯನ ಸೌಜನ್ಯ ಮತ್ತು ಶಿಷ್ಟಾಚಾರದ ಭಾಗವಾಗಿದೆ ಎಂದು ಹೇಳಿದ್ದಾರೆ.

ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಹಲವಾರು ವಿಷಯಗಳ ಕುರಿತು ಮೋದಿ ಜತೆ ಚರ್ಚೆ ನಡೆಸಲಾಯಿತು. ರಾಜ್ಯದ ಆಡಳಿತ ಮತ್ತು ಸಮಗ್ರ ಅಭಿವೃದ್ಧಿ ವಿಷಯಗಳ ಬಗ್ಗೆ ಕುರಿತು ಚರ್ಚೆ ನಡೆಸಿದ್ದೇನೆ. ನಾನು ಪ್ರಧಾನ ಮಂತ್ರಿಯೊಂದಿಗೆ ತಮ್ಮ ಮಾತುಕತೆಯ ಸಂದರ್ಭದಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ ಎಂದಿದ್ದಾರೆ.

- Advertisement -

ರಾಜ್ಯಕ್ಕೆ ಬರಬೇಕಾದ ಬಾಕಿ ಹಣವನ್ನು ಬಿಡುಗಡೆ ಮಾಡಲು ಈ ಸಂದರ್ಭದಲ್ಲಿ ಮನವಿ ಮಾಡಲಾಗಿದೆ ಎಂದೂ ಮಮತಾ ಹೇಳಿದ್ದಾರೆ. ಟಿಎಂಸಿ ಪ್ರಕಾರ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳಕ್ಕೆ 1.18 ಲಕ್ಷ ಕೋಟಿ ಬಾಕಿ ಇರಿಸಿಕೊಂಡಿದೆ ಎಂದು ವರದಿಯಾಗಿದೆ.



Join Whatsapp