ತಮಿಳುನಾಡಿನಲ್ಲಿ ಡಿಎಂಕೆಯನ್ನು ಬಿಜೆಪಿ ಮುಟ್ಟಲು ಸಾಧ್ಯವಿಲ್ಲ ಎಂದು ಸಿಎಂ ಎಂಕೆ ಸ್ಟ್ಯಾಲಿನ್ ಪುತ್ರ ಉದಯನಿಧಿ ಸ್ಟ್ಯಾಲಿನ್ ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಮುಂದಿನ 40 ದಿನಗಳ ಕಾಲ ತಮಿಳುನಾಡಿನಲ್ಲಿ ವಾಸ್ತವ್ಯ ಮಾಡುವಂತೆ ಪ್ರಧಾನಿ ಮೋದಿಗೆ ಸವಾಲೆಸೆದ ಅವರು, ಅದರ ನಂತರವೂ ರಾಜ್ಯದಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದರು.
ಚೆನ್ನೈ: ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರು ಬಾಯಿ ತೆಗೆದಾಗಲೆಲ್ಲಾ ಸುಳ್ಳೇ ಹೊರಬರುತ್ತದೆ ಎಂದು ಹೇಳಿದ್ದಾರೆ.
ಪ್ರವಾಹ ಅಥವಾ ಚಂಡಮಾರುತದಿಂದ ತಮಿಳುನಾಡಿಗೆ ಹಾನಿಯಾದಾಗ ಪ್ರಧಾನಿ ಮೋದಿ ತಮಿಳುನಾಡಿಗೆ ಭೇಟಿ ನೀಡುವುದಿಲ್ಲ, ಆದರೆ ಚುನಾವಣಾ ಸಮಯದಲ್ಲಿ ಭೇಟಿ ನೀಡುತ್ತಾರೆ ಎಂದು ಹೇಳಿದ್ದಾರೆ.
ತಮಿಳುನಾಡಿನಲ್ಲಿ ಡಿಎಂಕೆಯನ್ನು ಬಿಜೆಪಿ ಮುಟ್ಟಲು ಸಾಧ್ಯವಿಲ್ಲ ಎಂದ ಸ್ಟಾಲಿನ್, ಲೋಕಸಭೆ ಚುನಾವಣೆಗೆ ಮುನ್ನ ಮುಂದಿನ 40 ದಿನಗಳ ಕಾಲ ತಮಿಳುನಾಡಿನಲ್ಲಿ ವಾಸ್ತವ್ಯ ಮಾಡುವಂತೆ ಪ್ರಧಾನಿ ಮೋದಿಗೆ ಸವಾಲೆಸೆದಿದ್ದಾರೆ. ಬಿಜೆಪಿಗೆ ರಾಜ್ಯದಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ತಮಿಳುನಾಡಿನ ಸುತ್ತಲೂ ಸುತ್ತಲಿದ್ದಾರೆ. ಅವರು ಬಾಯಿ ತೆಗೆದಾಗಲೆಲ್ಲಾ ಸುಳ್ಳೇ ಹೊರಬರುತ್ತದೆ. ಡಿಎಂಕೆಯನ್ನು ಬಿಜೆಪಿ ನಾಶ ಪಡಿಸುತ್ತದೆ ಎಂದು ಅವರು ಹೇಳುತ್ತಾರೆ. ಕಳೆದ 60-70 ವರ್ಷಗಳಿಂದ ಹೀಗೆ ಹೇಳುತ್ತಿದ್ದ ಎಲ್ಲರೂ ಈಗ ನಾಶವಾಗಿದ್ದಾರೆ. ಹಾಗಾಗಿ ಪ್ರೀತಿಯ ಪ್ರಧಾನಮಂತ್ರಿಗಳೇ, ನೀವು ಮಾತ್ರವಲ್ಲ, ನಿಮ್ಮ ಅಜ್ಜ ಕೂಡ ಡಿಎಂಕೆಗೆ ಏನನ್ನೂ ಮಾಡಲು ಸಾಧ್ಯವಿಲ್ಲ. ನೀವು ಡಿಎಂಕೆಯನ್ನು ಮುಟ್ಟಲೂ ಸಾಧ್ಯವಿಲ್ಲ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.