►ಸಿಎಂ, ಡಿಸಿಎಂ ಭಿನ್ನ ಹೇಳಿಕೆ
ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೂ, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೂ ಲಿಂಕ್ ಕಾಣುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಗೂ ಸಾಮ್ಯತೆ ಇಲ್ಲ ಎಂದಿದ್ದರು. ಈ ಮೂಲಕ ಸಿಎಂ, ಡಿಸಿಎಂ ಭಿನ್ನ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಪಿ ಬಸ್ನಲ್ಲಿ ಬಂದು ಹೋಗಿರುವ ದೃಶ್ಯಗಳು ಪತ್ತೆಯಾಗಿವೆ. ಆರೋಪಿ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲೂ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಪ್ರಕರಣದ ತನಿಖೆಗೆ ಪೊಲೀಸರು 7-8 ತಂಡ ರಚನೆ ಮಾಡಿದ್ದಾರೆ. ಪ್ರಕರಣದ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶಕೊಟ್ಟಿದ್ದೇವೆ ಎಂದರು.
ಬೆಂಗಳೂರಿನ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ಆಯಾಮಗಳಲ್ಲೂ ಪ್ರಕರಣದ ತನಿಖೆ ಮಾಡುತ್ತಿದ್ದೇವೆ ಎಂದರು.
ಬ್ರ್ಯಾಂಡ್ ಬೆಂಗಳೂರು ಹೆಸರು ಹಾಳು ಮಾಡುವ ಪ್ರಯತ್ನ ನಡೆದಿದೆ. ಬೆಂಗಳೂರನ್ನು ಹಾಳು ಮಾಡುವ ಎಲ್ಲ ಕೆಲಸ ಮಾಡುತ್ತಿದ್ದಾರೆ. ಪ್ರಕರಣದ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶಕೊಟ್ಟಿದ್ದೇವೆ ಬಿಜೆಪಿಯವರು ರಾಜಕಾರಣ ಮಾಡುತ್ತೇವೆ ಅಂದರೇ ಮಾಡಿಕೊಳ್ಳಲಿ ಎಂದು ಹೇಳಿದರು.