ಉಡುಪಿ: ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಬೈಕ್ ರ‍್ಯಾಲಿ

Prasthutha|

ಉಡುಪಿ: ಸಂಸದೆ ಶೋಭಾ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ತೀವ್ರಗೊಂಡಿದೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆ ಮಾಡಬೇಕೆಂದು ಆಗ್ರಹಿಸಿ ಮಲ್ಪೆಯಿಂದ ಉಡುಪಿ ಬಿಜೆಪಿ ಕಚೇರಿಯವರೆಗೆ ಕಾರ್ಯಕರ್ತರು ಬೈಕ್ ರ‌್ಯಾಲಿ ನಡೆಸಿದ್ದಾರೆ.

- Advertisement -

ಮಲ್ಪೆ ಏಳೂರು ಮೊಗವೀರ ಭವನದ ಬಳಿಯಿಂದ ಮೀನುಗಾರ ಮುಖಂಡ ಕಿಶೋರ್ ಡಿ. ಸುವರ್ಣ ನೇತೃತ್ವದಲ್ಲಿ ಹೊರಟ ಬೈಕ್ ರ‌್ಯಾಲಿ, ಆದಿ ಉಡುಪಿ, ಕರಾವಳಿ ಬೈಪಾಸ್, ಬನ್ನಂಜೆ, ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಮಾಪ್ತಿಗೊಂಡಿದೆ.

ಬಳಿಕ, ಈ ಬಾರಿಯ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯನ್ನು ಬದಲಾಯಿಸಬೇಕು, ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಅದರ ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಿದ್ದಾರೆ.



Join Whatsapp