ಕಡಬ | ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ: ಆರೋಪಿಯ ಬಂಧನ

Prasthutha|

ಕಡಬ: ವಿದ್ಯಾರ್ಥಿನಿಯರ ಮೇಲೆ ನಡೆದ ಆಸಿಡ್ ದಾಳಿಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ಕೇರಳ ಮೂಲದ ಅಬಿನ್ ಬಂಧಿತ ಆರೋಪಿ. ಈತ ಎಂ. ಬಿ.ಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ.


ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆರೋಪಿ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ.



Join Whatsapp