ಪ್ರಜ್ಞಾ ಸಿಂಗ್ ಠಾಕೂರ್’ಗೆ ಕೈತಪ್ಪಿದ ಟಿಕೆಟ್: ಪ್ರಧಾನಿ ಮೋದಿ ಬಗ್ಗೆ ಸಂಸದೆ ಹೇಳಿದ್ದೇನು?

Prasthutha|

ಭೋಪಾಲ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭೋಪಾಲ್ ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಕಣಕ್ಕಿಳಿಸದಿರುವ ಪಕ್ಷದ ನಿರ್ಧಾರಕ್ಕೆ ಭಾನುವಾರ ಪ್ರತಿಕ್ರಿಯಿಸಿದ್ದಾರೆ.

- Advertisement -


‘ನಾನು ನಾಥೂರಾಮ್ ಗೋಡ್ಸೆಯನ್ನು ‘ದೇಶಭಕ್ತ’ ಎಂದು ಹೊಗಳಿದ್ದಕ್ಕಾಗಿ ಪ್ರಧಾನಿ ಮೋದಿ ಅವರು ನನ್ನ ಹೇಳಿಕೆಗಳ ಕುರಿತು ಬೇಸರ ವ್ಯಕ್ತಪಡಿಸಿದ್ದರು. ಅಲ್ಲದೇ ನನ್ನನ್ನು ಕ್ಷಮಿಸುವುದಿಲ್ಲ ಎಂದೂ ಅವರು ಹೇಳಿದ್ದರು’ ಎಂದು ಠಾಕೂರ್ ತಿಳಿಸಿದ್ದಾರೆ.


‘ನಾನು ಈ ಹಿಂದೆಯೂ ಟಿಕೆಟ್ ಬಯಸಿರಲಿಲ್ಲ. ಈಗಲೂ ಟಿಕೆಟ್ ಬಯಸುತ್ತಿಲ್ಲ. ನಾನು ನೀಡಿದ್ದ ಕೆಲವು ಹೇಳಿಕೆಗಳಿಂದ ಪ್ರಧಾನಿ ಮೋದಿ ಅವರ ಮನಸ್ಸಿಗೆ ನೋವುಂಟು ಮಾಡಿರಬಹುದು. ಹಾಗಾಗಿ ಅವರು ನನ್ನನ್ನು ಕ್ಷಮಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೆ, ನಾನು ಈಗಾಗಲೇ ಅವರ ಬಳಿ ಕ್ಷಮೆಯಾಚಿಸಿದ್ದೇನೆ’ ಎಂದು ಠಾಕೂರ್ ‘ಇಂಡಿಯಾ ಟುಡೇ’ಗೆ ತಿಳಿಸಿದ್ದಾರೆ.

- Advertisement -


ಪ್ರಜ್ಞಾ ಸಿಂಗ್ ಠಾಕೂರ್ ಅವರು ಭೋಪಾಲ್ ಲೋಕಸಭಾ ಕ್ಷೇತ್ರದ ಸಂಸದೆಯಾಗಿದ್ದಾರೆ. ಈ ಬಾರಿ ಅವರ ಬದಲಿಗೆ ಅಲೋಕ್ ಶರ್ಮಾಗೆ ಟಿಕೆಟ್ ನೀಡಲಾಗಿದೆ.



Join Whatsapp