ಬೆಂಗಳೂರು: ಇಡಿ ಪ್ರಕರಣದಲ್ಲಿ ಬಿಗ್ ರಿಲೀಫ್ ವಿಚಾರವಾಗಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಸುಪ್ರೀಂ ಕೋರ್ಟ್ ಹಾಗೂ ನ್ಯಾಯಮೂರ್ತಿಗಳಿಗೆ ಸಾಷ್ಟಾಂಗ ನಮಸ್ಕಾರ ಎಂದು ಹೇಳಿದ್ದಾರೆ.
ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ‘ಸುಪ್ರೀಂ ರಿಲೀಫ್ ನೀಡಿದ ಮಾಹಿತಿ ಸಿಕ್ಕಿದ್ದು, ಕಷ್ಟದ ಜೀವನದ ದೊಡ್ಡ ಸಂತೋಷದ ಇವತ್ತು. ವಕೀಲರುಗಳಿಂದ ಫೋನಿನ ಸುರಿಮಳೆ ಬರುತ್ತಿದೆ. ನಾನೇನೂ ತಪ್ಪು ಮಾಡಿಲ್ಲ. ಇಡಿ ಅಧಿಕಾರಿಗಳಿಂದ ಕ್ರಮ ಆಗಿದ್ದು ತಪ್ಪು ಎನ್ನುವ ಮಾಹಿತಿ ಗೊತ್ತಾಗುತ್ತಿದೆ. ಈಗಲೂ ಸಿಬಿಐನವರು ಏನೇನು ಮಾಡುತ್ತಿದ್ದಾರೆಂದು ಸದ್ಯದಲ್ಲೇ ಹೇಳುವೆ ಎಂದರು.