ಬಂಧಿತ PFI ನಾಯಕನಿಗೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಂಬಂಧವಿಲ್ಲ: ಪೊಲೀಸ್ ಸ್ಪಷ್ಟನೆ

Prasthutha|

ಬೆಂಗಳೂರು: ಆಂಧ್ರಪ್ರದೇಶದಲ್ಲಿ ಎನ್ ಐಎ ಬಂಧಿಸಿದ ನಿಷೇಧಿತ ಪಿಎಫ್ ಐ ಸಂಘಟನೆಯ ನಾಯಕ ಅಬ್ದುಲ್ ಸಲೀಂ ಅವರಿಗೂ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಂಬಂಧವಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

- Advertisement -


ಅಬ್ದುಲ್ ಸಲೀಂ ಅವರನ್ನು ಎನ್ ಐಎ ಅಧಿಕಾರಿಗಳು ಬಂಧಿಸಿರುವುದನ್ನು ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ತಳುಕು ಹಾಕಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.


ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಡಪ ಪೊಲೀಸರು, ತೆಲಂಗಾಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಸಲೀಂನನ್ನು ಬಂಧಿಸಲಾಗಿದೆ. ಬೆಂಗಳೂರಿನ ಸ್ಫೋಟ ಪ್ರಕರಣಕ್ಕೂ ಈ ಬಂಧನಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರು ಪೊಲೀಸರು ಕೂಡಾ ಇದನ್ನು ಧೃಡಪಡಿಸಿದ್ದಾರೆ ಎಂದು ಆಲ್ಟ್ ನ್ಯೂಸ್ ನ ಮಹಮ್ಮದ್ ಝುಬೈರ್ ಅವರು ಟ್ವೀಟ್ ಮಾಡಿದ್ದಾರೆ.



Join Whatsapp