ಜಪ್ತಿಯಾದ ಜಯಲಲಿತಾ ಒಡವೆ ಹಿಂದಿರುಗಿಸುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ

Prasthutha|

ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿ ಮಾಡಲಾದ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸುವುವಂತೆ ತಾನೇ‌ ನೀಡಿದ ತೀರ್ಪಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.

- Advertisement -

ದಿ.ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜಪ್ತಿ ಮಾಡಲಾಗಿದ್ದ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಮಾರ್ಚ್.5, 6ರೊಳೆಗೆ ಹಿಂದಿರುಗಿಸುವಂತೆ ಹೈಕೋರ್ಟ್ ಸೂಚಿಸಿತ್ತು.

ಈ ಆದೇಶಕ್ಕೆ ಮೇಲ್ಮನವಿಯನ್ನು ಸಲ್ಲಿಸಿದ್ದ ಜಯಲಲಿತಾ ವಾರಸುದಾರೆ ಜೆ.ದೀಪಾ ಪರ ವಕೀಲರು, ವಿಶೇಷ ಕೋರ್ಟ್ ಆದೇಶದಿಂದ ತಮ್ಮ ಹಕ್ಕಿಗೆ ಧಕ್ಕೆಯಾಗಿದೆ ಎಂಬುದಾಗಿ ಕೋರಿದ್ದರು.

- Advertisement -

ಈ ವಾದವನ್ನು ಪರಿಗಣಿಸಿದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಜಯಲಲಿತಾ ಅವರ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದುರಿಗಿಸುವ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.



Join Whatsapp