ಜನಪ್ರಿಯ ಜಾಲತಾಣಗಳಾದ ಫೇಸ್ ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಆಗಿದ್ದು, ಜಗತಿನಾದ್ಯಂತ ಏಕಾಏಕಿ ಖಾತೆಗಳು ಲಾಗೌಟ್ ಆಗಿವೆ.
ಇಂದು (ಮಾರ್ಚ್ 05) ರಾತ್ರಿ 9ರ ಸುಮಾರಿಗೆ ಏಕಾಏಕಿ ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್ ಏಕಾಏಕಿ ತನ್ನಷ್ಟಕ್ಕೆ ತಾನೇ ಲಾಗೌಟ್ ಆಗಿವೆ. ಇದರಿಂದ ಬಳಕೆದಾರರು ಕಂಗಲಾಗಿದ್ದಾರೆ. ಇನ್ನು ಫೇಸ್ಬುಕ್ ಪಾಸ್ ವರ್ಡ್ ಮರೆತವರು ಪುನಃ ಲಾಗಿನ್ ಆಗುವುದಕ್ಕೆ ಪರದಾಡುವಂತಾಗಿದೆ.
ಮೊಬೈಲ್ ಹಾಗೂ ಕಂಪ್ಯೂಟರ್ನಲ್ಲಿ ಎರಡೂ ಖಾತೆಗಳು ಲಾಗ್ ಔಟ್ ಆಗಿದ್ದು, ಮತ್ತೆ ಲಾಗ್ ಇನ್ ಆಗುತ್ತಿಲ್ಲ. ಏಕಾಏಕಿ ಖಾತೆಗಳು ಲಾಗೌಟ್ ಆಗಿರುವುದು ಏಕೆ? ಎನ್ನುವುದು ಬಳಕೆದಾರರ ಪ್ರಶ್ನೆಯಾಗಿದೆ. ತನ್ನಷ್ಟಕ್ಕೆ ತಾನೇ ಲಗೌಟ್ ಆಗಿದ್ದರಿಂದ ಪಾಸ್ವರ್ಡ್ ಮರೆತವರು ಮತ್ತು ಬೇರೆಯವರ ಕಡೆಯಿಂದ ಫೇಸ್ಬುಕ್ ಖಾತೆ ಸೃಷ್ಟಿಸಿಕೊಂಡವರಿಗೆ ಮತ್ತೆ ಲಾಗಿನ್ ಆಗುವುದು ಹೇಗೆ ಎನ್ನುವ ಚಿಂತೆ ಕಾಡತೊಡಗಿದೆ. ಇದರಿಂದಾಗಿ ಸಾವಿರಾರು ಜನ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಯಾಕೆ ಈ ಸಮಸ್ಯೆ ಉಂಟಾಗಿದೆ ಎಂಬುದರ ಕುರಿತು ಫೇಸ್ಬುಕ್ ಅಥವಾ ಇನ್ಸ್ಟಾಗ್ರಾಂ ಇದುವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.